
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 42ನೇ ಎಸಿಜೆಎಂ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.
ಸಿಸಿಬಿ ದಾಳಿ ವೇಳೆ ಪ್ರಜ್ವಲ್ನ ಅತಿಭದ್ರತಾ ಬ್ಯಾರಕ್ನಲ್ಲಿ ರೆಡ್ಮಿ ಮೊಬೈಲ್, ಚಾರ್ಜರ್, ಸಿಮ್ ಕಾರ್ಡ್, ಪೆನ್ ಡ್ರೈವ್ ಮತ್ತು ಡೈರಿ ಪತ್ತೆಯಾಗಿದ್ದು, ಆಂಧ್ರಪ್ರದೇಶದ ಏರ್ಟೆಲ್ ಸಿಮ್ ಬಳಕೆಯಾಗಿರುವುದು ತನಿಖೆಯಲ್ಲಿ ಕಂಡುಬಂದಿದೆ.
ಜೈಲಿನೊಳಗೆ ನಿಷೇಧಿತ ವಸ್ತುಗಳನ್ನು ತಲುಪಿಸಿದವರನ್ನು ಪತ್ತೆಹಚ್ಚಲು ಪ್ರಜ್ವಲ್ ಹಾಗೂ ಸಹಕರಿಸಿದ ವಿಚಾರಣಾಧೀನ ಕೈದಿ ಪ್ರತಾಪ್ ರಾಯ್ನನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಲಿದ್ದಾರೆ.