
ಈರುಳ್ಳಿ ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರವು ನಾಸಿಕ್ನಿಂದ 'ಕಂದಾ ಎಕ್ಸ್ಪ್ರೆಸ್' ವಿಶೇಷ ರೈಲುಗಳ ಮೂಲಕ 5 ಪ್ರಮುಖ ನಗರಗಳಿಗೆ 800 ಮೆಟ್ರಿಕ್ ಟನ್ ಈರುಳ್ಳಿ ಪೂರೈಸುತ್ತಿದೆ.
ಚೆನ್ನೈ, ಮಧುರೈ, ದೆಹಲಿ, ಎರ್ನಾಕುಲಂ ಮತ್ತು ಗುವಾಹಟಿ ನಗರಗಳಿಗೆ ಈರುಳ್ಳಿ ಸರಬರಾಜು ಮಾಡಲಾಗುತ್ತಿದ್ದು, ಕೆಜಿಗೆ 35 ರೂಪಾಯಿ ದರದಲ್ಲಿ ಗ್ರಾಹಕರಿಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪ್ರಕಾರ, NCCF, NAFED ಮತ್ತು ಕೇಂದ್ರೀಯ ಭಂಡಾರ್ ಮೂಲಕ ಈರುಳ್ಳಿ ವಿತರಣೆ ನಡೆಯಲಿದ್ದು, ಅಗತ್ಯಕ್ಕೆ ಅನುಗುಣವಾಗಿ ಇತರ ನಗರಗಳಿಗೂ ಪೂರೈಕೆ ವಿಸ್ತರಿಸಲಾಗುವುದು.