
ಮಾಜಿ ನಾಯಕ ಎಂ.ಎಸ್. ಧೋನಿ ಮತ್ತು ರಿಷಭ್ ಪಂತ್ ಒಟ್ಟಿಗೆ ಪಾರ್ಟಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪಂತ್ ಅವರ ವರ್ತನೆ ಚರ್ಚೆಗೆ ಗ್ರಾಸವಾಗಿದೆ.
ವಿಡಿಯೋದಲ್ಲಿ ಮೇಜಿನ ಮೇಲೆ ಬಿಯರ್ ಕ್ಯಾನ್ ಮತ್ತು ಕಾಕ್ ಟೇಲ್ ಇರುವುದು ಕಂಡುಬಂದಿದ್ದು, ಪಂತ್ ಮದ್ಯದ ಅಮಲಿನಲ್ಲಿರುವಂತೆ ಕಾಣಿಸುತ್ತಿದ್ದಾರೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿರುವ ಪಂತ್, ಈ ಹಿಂದೆ 2022ರ ಡಿಸೆಂಬರ್‌ನಲ್ಲಿ ಕಾರು ಅಪಘಾತಕ್ಕೂ ಮುನ್ನ ಧೋನಿ ಜೊತೆ ದುಬೈನಲ್ಲಿ ಕ್ರಿಸ್‌ಮಸ್ ಆಚರಿಸಿದ್ದರು.