ಆಲಮಟ್ಟಿ ಜಲಾಶಯದಿಂದ ಬರುತ್ತಿರುವ ನೀರಿನ ಒತ್ತಡದ ಹಿನ್ನೆಲೆಯಲ್ಲಿ ಬಸವಸಾಗರ ಜಲಾಶಯದ 24 ಕ್ರಸ್ಟ್‌ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ 1.10 ಲಕ್ಷ ಕ್ಯುಸೆಕ್ ನೀರನ್ನು ಬುಧವಾರ ಬಿಡುಗಡೆ ಮಾಡಲಾಗಿದೆ.
ಜಲಾಶಯದ ಗರಿಷ್ಠ ಮಟ್ಟ 492.25 ಮೀಟರ್ ಇದ್ದು, ಪ್ರಸ್ತುತ 492.25 ಮೀಟರ್ (ಶೇ 94.28) ನೀರು ಸಂಗ್ರಹವಿದ್ದು, ನದಿ ತೀರದ ಗ್ರಾಮಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.
ನದಿ ತೀರದ ಯಳಗುಂದಿ, ಕಡದರಗಡ್ಡಿ ಸೇರಿದಂತೆ ದೇವದುರ್ಗ ತಾಲೂಕಿನ ಗ್ರಾಮಗಳಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದ್ದು, ನದಿಯಲ್ಲಿ ಹರಿಗೋಲು ಬಳಸದಂತೆ ಅಧಿಕಾರಿಗಳು ಸೂಚಿಸಿದ್ದಾರೆ.