
ಉತ್ತರಪ್ರದೇಶದ 23 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಪ್ರವಾಹ ಸಂಬಂಧಿತ ಅವಘಡಗಳಲ್ಲಿ ಮೂವರು ಮೃತಪಟ್ಟಿದ್ದಾರೆ ಮತ್ತು 16,784 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ 1,499 ಬೋಟ್ಗಳು ಮತ್ತು 1,067 ವೈದ್ಯಕೀಯ ತಂಡಗಳನ್ನು ನಿಯೋಜಿಸಲಾಗಿದ್ದು, ಸಂತ್ರಸ್ತರಿಗಾಗಿ 1,311 ಶಿಬಿರಗಳನ್ನು ಸ್ಥಾಪಿಸಲಾಗಿದೆ.
ಬನ್ಬಸಾ ಜಲಾಶಯದಿಂದ ಶಾರದಾ ನದಿಗೆ ಎರಡು ಲಕ್ಷ ಕ್ಯೂಸೆಕ್ಗಿಂತ ಹೆಚ್ಚು ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.