
ಭಾರತದಲ್ಲಿ ಉಪಗ್ರಹ ಆಧಾರಿತ ಇಂಟರ್ನೆಟ್ ಸಂಪರ್ಕಕ್ಕೆ ಸಂಬಂಧಿಸಿದ ವಿವಾದದ ಕುರಿತು ಸ್ಪೇಸ್‌ಎಕ್ಸ್ ಸಿಇಒ ಎಲಾನ್ ಮಸ್ಕ್ ಎಕ್ಸ್ ಖಾತೆಯಲ್ಲಿ ವಿಡಂಬನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.
ಭಾರತದಲ್ಲಿ ಸ್ಪರ್ಧಿಸಲು ಸ್ಟಾರ್‌ಲಿಂಕ್‌ಗೆ ಅವಕಾಶ ನೀಡದಂತೆ ಕೆಲವರು ವ್ಯವಸ್ಥಿತ ಯೋಜನೆ ಹೊಂದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಭಾರ್ತಿ-ಯುಟೆಲ್‌ಸ್ಯಾಟ್ ಒನ್‌ವೆಬ್ ಹಾಗೂ ಜಿಯೋ ಸ್ಯಾಟಲೈಟ್ ಕಮ್ಯುನಿಕೇಷನ್ ಕಂಪನಿಗಳಿಗೆ ಕೇಂದ್ರ ಸರ್ಕಾರವು ಈಗಾಗಲೇ ಅನುಮತಿ ನೀಡಿದೆ.