
2026ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತ ಒಟ್ಟು 39 ಪದಕಗಳನ್ನು ಗೆದ್ದು ನಾಲ್ಕನೇ ಸ್ಥಾನ ಪಡೆದಿದ್ದು, ಅದರಲ್ಲಿ 13 ಚಿನ್ನ, 17 ಬೆಳ್ಳಿ ಮತ್ತು 9 ಕಂಚಿನ ಪದಕಗಳಿವೆ.
ಮಹಿಳೆಯರ ಶಾಟ್ಪುಟ್ F-57 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಕರ್ನಾಟಕದ ಪ್ಯಾರಾ ಅಥ್ಲೀಟ್ ಶಿಲ್ಪಾ ಅವರಿಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.
ಶಿಲ್ಪಾ ಅವರ ಸಾಧನೆಯನ್ನು ಸಂಭ್ರಮಿಸಲು ನೂರಾರು ಅಭಿಮಾನಿಗಳು ವಿಮಾನ ನಿಲ್ದಾಣಕ್ಕೆ ಆಗಮಿಸಿ ಹೂಗುಚ್ಛ ನೀಡಿ ಗೌರವಿಸಿದರು.