
2019ರ ಬಾಲಾಕೋಟ್ ವೈಮಾನಿಕ ದಾಳಿಯ ನಂತರ ಪಾಕಿಸ್ತಾನದ ಎಫ್-16 ವಿಮಾನವನ್ನು ಹೊಡೆದುರುಳಿಸಿದ್ದ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ವಾಯುಪಡೆಯ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದಾರೆ.
2004ರ ಜೂನ್ 19ರಂದು ವಾಯುಪಡೆಗೆ ಸೇರಿದ್ದ ಅಭಿನಂದನ್, 22 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ, ಇದೀಗ ಖಾಸಗಿ ವಿಮಾನಯಾನ ಸಂಸ್ಥೆಯಲ್ಲಿ ಕಮರ್ಷಿಯಲ್ ಪೈಲಟ್ ಆಗಿ ಸೇರ್ಪಡೆಗೊಳ್ಳುತ್ತಿದ್ದಾರೆ.
ಶತ್ರುಗಳ ವಶದಲ್ಲಿದ್ದಾಗ ಧೈರ್ಯ ಮೆರೆದಿದ್ದ ಅಭಿನಂದನ್ ಅವರಿಗೆ ಭಾರತದ ಮೂರನೇ ಅತ್ಯುನ್ನತ ಮಿಲಿಟರಿ ಗೌರವವಾದ 'ವೀರ್ ಚಕ್ರ' ನೀಡಿ ಗೌರವಿಸಲಾಗಿತ್ತು.