
ಆ್ಯಂಬಿಡೆಂಟ್ ಕಂಪನಿಯಿಂದ ಗ್ರಾಹಕರಿಗೆ ವಂಚನೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಮೆಹಫೂಜ್ ಅಲಿ ಖಾನ್ ಅವರನ್ನು ಕೈಬಿಟ್ಟಿದ್ದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.
ಜನಪ್ರತಿನಿಧಿಗಳ ಕೋರ್ಟ್ ಸೂಕ್ತ ಸಾಕ್ಷ್ಯಾಧಾರಗಳಿಲ್ಲವೆಂದು ಇಬ್ಬರನ್ನೂ ಪ್ರಕರಣದಿಂದ ಕೈಬಿಟ್ಟಿತ್ತು, ಆದರೆ 8 ತಿಂಗಳ ನಂತರ ರಾಜ್ಯ ಸರ್ಕಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಜನಾರ್ದನ ರೆಡ್ಡಿ ಹಾಗೂ ಮೆಹಫೂಜ್ ಅಲಿಖಾನ್‌ಗೆ ನೋಟಿಸ್ ಜಾರಿ ಮಾಡಿದೆ.