
ಕಲಬುರಗಿ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ 23 ವರ್ಷದ ಮಹಮ್ಮದ್ ಸಮೀರ್ ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿಯ ಮೊಬೈಲ್ ಫೋನ್ ಪರಿಶೀಲನೆಯಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಪಾಕಿಸ್ತಾನದ ಭಾಗವಾಗಿ ತೋರಿಸುವ ವಿಡಿಯೋಗಳು ಹಾಗೂ ಉಗ್ರರೊಂದಿಗೆ ವಾಟ್ಸಪ್ ಸಂಪರ್ಕ ಇರುವುದು ಪತ್ತೆಯಾಗಿದೆ.
ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 113(3) ಮತ್ತು 197 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಗಾಗಿ ಕೇಂದ್ರೀಯ ತನಿಖಾ ಸಂಸ್ಥೆಗಳಿಗೆ ಮಾಹಿತಿ ರವಾನಿಸಲಾಗಿದೆ.