
ಬೆಂಗಳೂರು ಉತ್ತರ ಮತ್ತು ದಕ್ಷಿಣ ನಗರ ಪಾಲಿಕೆಗಳು ಜಂಟಿಯಾಗಿ ನಡೆಸಿದ 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನದಡಿ ಕಳೆದ ಐದು ದಿನಗಳಲ್ಲಿ 4,000 ಟನ್ ನಿರ್ಮಾಣ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ.
ಈ ಕಾರ್ಯಾಚರಣೆಗಾಗಿ 18 ಟಿಪ್ಪರ್‌ಗಳು ಮತ್ತು 4 ಲೋಡರ್‌ಗಳನ್ನು ಬಳಸಲಾಗುತ್ತಿದ್ದು, ಸಂಗ್ರಹಿಸಿದ ತ್ಯಾಜ್ಯವನ್ನು ಮಾರೆನಹಳ್ಳಿ ವಿಲೇವಾರಿ ಕೇಂದ್ರಕ್ಕೆ ಸಾಗಿಸಲಾಗುತ್ತಿದೆ.
'ಕ್ಲಿಯರ್ ಇಟ್' ಮೊಬೈಲ್ ಆ್ಯಪ್ ಮೂಲಕ 637 ದೂರುಗಳು ದಾಖಲಾಗಿದ್ದು, 1,476 ಟನ್ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ ಎಂದು ಪಾಲಿಕೆ ತಿಳಿಸಿದೆ.