
ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಶುಕ್ರವಾರ ತಡರಾತ್ರಿ ಹುಬ್ಬಳ್ಳಿಗೆ ಆಗಮಿಸಿದ್ದು, ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಅವರು ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಕೆಎಲ್‌ಇ ನೂತನ ವೈದ್ಯಕೀಯ ಮಹಾವಿದ್ಯಾಲಯದ ಕಟ್ಟಡ ಮತ್ತು ಆಸ್ಪತ್ರೆಯನ್ನು ಉದ್ಘಾಟಿಸಿ, ಅಲ್ಲಿಯೇ ಮಧ್ಯಾಹ್ನದ ಊಟ ಸ್ವೀಕರಿಸಲಿದ್ದಾರೆ.
ನಂತರ ವಿಶೇಷ ವಿಮಾನದ ಮೂಲಕ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ತೆರಳಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಗ್ರಾಮಕ್ಕೆ ಆಗಮಿಸಿ ಬೀರೇಶ್ವರ ಕೋಆಪರೇಟಿವ್ ಕ್ರೆಡಿಟ್ ಸೊಸೈಟಿಯ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ.