
ಖಾನಾಪುರ ಮತ್ತು ಕಣಕುಂಬಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಕಿತ್ತೂರು ತಾಲೂಕಿನ ಇಟಗಿ ಗ್ರಾಮದ ಬಳಿ ನದಿಗೆ 7000 ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ಅಕ್ಕ ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತವಾಗಿದೆ.
ನದಿ ಪಾತ್ರದ ಕೆಳ ಹಂತದ ಸೇತುವೆಗಳು ಮುಳುಗುವ ಹಂತದಲ್ಲಿದ್ದು, ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್‌ಗಳನ್ನು ತೆರೆದು ನೀರನ್ನು ಹೊರಬಿಡಲಾಗುತ್ತಿದೆ.