
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 5ರಂದು ರಾತ್ರಿ 8 ಗಂಟೆಗೆ ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳು ಟಿ20 ಏಷ್ಯಾಕಪ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಟೂರ್ನಿಯಲ್ಲಿ ಭಾರತ ತಂಡವು ಇದುವರೆಗೆ ಆಡಿದ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿ ಅಜೇಯವಾಗಿ ಮುನ್ನಡೆಯುತ್ತಿದ್ದರೆ, ಪಾಕಿಸ್ತಾನ ತಂಡವು ತನ್ನ ಮೊದಲ ಪಂದ್ಯದಲ್ಲಿ ಥೈಲ್ಯಾಂಡ್ ವಿರುದ್ಧ ಗೆಲುವು ದಾಖಲಿಸಿದೆ.
ದುಬೈ ಪಿಚ್ ಬ್ಯಾಟರ್ ಮತ್ತು ಬೌಲರ್ಗಳಿಗೆ ಸಮಾನ ನೆರವು ನೀಡಲಿದ್ದು, ಪಂದ್ಯದ ನೇರಪ್ರಸಾರವನ್ನು ಸೋನಿ ಸ್ಪೋರ್ಟ್ಸ್ ಮತ್ತು ಸೋನಿ ಲೈವ್ ಚಾನೆಲ್ಗಳಲ್ಲಿ ವೀಕ್ಷಿಸಬಹುದಾಗಿದೆ.