
ನಟ ಧನ್ವೀರ್ ಗೌಡ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಡುವಿನ ಮನಸ್ತಾಪಕ್ಕೆ ಹಣದ ವಿಷಯವೇ ಕಾರಣವೆನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ಆಡಿಯೋದಲ್ಲಿ ಧನ್ವೀರ್ ಅವರು ಹಣದ ಬಗ್ಗೆ ಮಾತನಾಡಿರುವುದು ಹಾಗೂ ಯಾರ ಜೀತದ ಆಳೂ ಅಲ್ಲ ಎಂದು ಹೇಳಿರುವುದು ಕೇಳಿಬಂದಿದೆ.
ಈ ಹೊಸ ಆಡಿಯೋ ವೈರಲ್ ಆಗುತ್ತಿದ್ದಂತೆ ಸ್ಯಾಂಡಲ್ವುಡ್ನಲ್ಲಿ ವಿವಾದ ಮತ್ತಷ್ಟು ಹೆಚ್ಚಾಗಿದೆ.