
ಸಚಿವ ಸಂಪುಟ ಪುನಾರಚನೆಯ ನಂತರ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಅಸಮಾಧಾನದ ಲಾಭ ಪಡೆಯಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದು, ಅಸಮಾಧಾನಿತ ಶಾಸಕರಿಗೆ ಜೆಡಿಎಸ್‌ಗೆ ಬರುವಂತೆ ಬಹಿರಂಗ ಆಹ್ವಾನ ನೀಡಿದ್ದಾರೆ.
ಹಾಸನದ ಹರದನಹಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನೋವಿನಲ್ಲಿರುವ ಶಾಸಕರಿಗೆ ಜೆಡಿಎಸ್ ಪಕ್ಷದ ಬಾಗಿಲು ತೆರೆದಿದೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.
ಸಂಪುಟದಲ್ಲಿ ಸ್ಥಾನ ಸಿಗದ ಶಾಸಕರನ್ನು ಸಮಾಧಾನಪಡಿಸಲು ಸಿಎಂ ಡಿಕೆ ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಮನೆ ಮನೆಗೆ ತೆರಳಿ ಮನವೊಲಿಸುವ ಪ್ರಯತ್ನ ನಡೆಸುತ್ತಿದ್ದಾರೆ.