
ಎನ್ವಿಡಿಯಾ ಸಿಇಒ ಜೆನ್ಸನ್ ಹುವಾಂಗ್ ಅವರು ಭಾರತದ ಎಐ ತಂತ್ರಜ್ಞಾನದ ಬೆಳವಣಿಗೆಯನ್ನು ಶ್ಲಾಘಿಸಿದ್ದು, ಎಐ ಆರ್ಥಿಕತೆಯನ್ನು ನಿರ್ಮಿಸಲು ಭಾರತ ತನ್ನ ಪ್ರಯತ್ನಗಳ ವೇಗವನ್ನು ಹೆಚ್ಚಿಸಬೇಕೆಂದು ಸಲಹೆ ನೀಡಿದ್ದಾರೆ.
ಸುಮಾರು 10 ವರ್ಷಗಳ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಎಐ ತಂತ್ರಜ್ಞಾನದ ಪ್ರಾಮುಖ್ಯತೆಯನ್ನು ಗುರುತಿಸಿದ್ದರು ಎಂದು ಹುವಾಂಗ್ ಸ್ಮರಿಸಿದ್ದಾರೆ.
ಭಾರತವು ತನ್ನದೇ ಆದ ಡೇಟಾ ಮತ್ತು ಭಾಷೆಗಳನ್ನು ಬಳಸಿಕೊಂಡು ಸ್ವಂತ ಎಐ ಮಾದರಿಗಳನ್ನು ಅಭಿವೃದ್ಧಿಪಡಿಸುತ್ತಿರುವುದು ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.