
ನಟಿ ಮಾಲಾಶ್ರೀ ಹಾಗೂ ರುಕ್ಮಿಣಿ ವಸಂತ್ ಒಟ್ಟಾಗಿ ನಟಿಸುತ್ತಿರುವ ಹೊಸ ಚಿತ್ರಕ್ಕೆ ‘ಮಂಗಳಗೌರಿ’ ಎಂದು ಹೆಸರಿಡಲಾಗಿದೆ.
ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಚಿತ್ರತಂಡವು ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೈಟಲ್ ಅನ್ನು ಬಿಡುಗಡೆ ಮಾಡಿದೆ.
ಈ ಬಿಗ್ ಬಜೆಟ್ ಸಿನಿಮಾವನ್ನು ರಾಹುಲ್ ಪಿ.ಕೆ ನಿರ್ದೇಶಿಸುತ್ತಿದ್ದು, ಕೆವಿಎನ್ ಪ್ರೊಡಕ್ಷನ್ಸ್ ಮತ್ತು ದಾಕ್ಷಾಯಣಿ ಟಾಕೀಸ್ ಜಂಟಿಯಾಗಿ ನಿರ್ಮಿಸುತ್ತಿವೆ.