
ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಗುಡ್ಡದಹಳ್ಳಿಯಲ್ಲಿ ಚಿನ್ನಾಭರಣಕ್ಕಾಗಿ 70 ವರ್ಷದ ವೃದ್ಧೆಯೊಬ್ಬರ ಕೊಲೆ ನಡೆದಿದೆ.
ಮನೆಯಲ್ಲಿ ಒಂಟಿಯಾಗಿ ವಾಸವಿದ್ದ ವೆಂಕಟಲಕ್ಷ್ಮಮ್ಮ ಅವರ ತಲೆ ಮತ್ತು ಕತ್ತಿನ ಭಾಗದಲ್ಲಿ ಗಾಯಗಳಾಗಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದುಷ್ಕರ್ಮಿಗಳು ವೃದ್ಧೆ ಮೇಲೆ ಹಲ್ಲೆ ಮಾಡಿ ಮನೆಯಲ್ಲಿದ್ದ ಬೀರುಗಳನ್ನು ಒಡೆದು ಚಿನ್ನಾಭರಣಗಳನ್ನು ಕದ್ದೊಯ್ದಿದ್ದು, ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.