
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಅಗ್ನಿಸಾಕ್ಷಿ' ಯಶಸ್ವಿಯಾಗಿ 100 ಸಂಚಿಕೆಗಳನ್ನು ಪೂರೈಸಿದ್ದು, ಹೊಸಪೇಟೆಯಲ್ಲಿ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿದೆ.
ಸಭಾಂಗಣಕ್ಕೆ ತೆರಳುವ ಮುನ್ನ ಧಾರಾವಾಹಿಯ ಮುಖ್ಯ ಪಾತ್ರಧಾರಿಗಳು ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ್ದಾರೆ.
ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಕಲಾವಿದರು ಒಟ್ಟಾಗಿ ಕುಳಿತು ಧಾರಾವಾಹಿಯ 2 ಗಂಟೆಗಳ ಸುದೀರ್ಘ ವಿಶೇಷ ಸಂಚಿಕೆಯನ್ನು ವೀಕ್ಷಿಸಿದ್ದಾರೆ.