
ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜ ಸ್ಥಾನಮಾನ ನೀಡಲು ಸರ್ಕಾರ ಚಿಂತನೆ ನಡೆಸಿದ್ದು, ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ರಾಷ್ಟ್ರಧ್ವಜದ ಗೌರವ ಮತ್ತು ನಿಯಮಗಳಿಗೆ ಯಾವುದೇ ಧಕ್ಕೆಯಾಗದಂತೆ ಕನ್ನಡ ಧ್ವಜದ ಬಳಕೆ ಹಾಗೂ ಸಂರಕ್ಷಣೆಗೆ ಸಂಬಂಧಿಸಿದ ಕಾನೂನು ಅಂಶಗಳನ್ನು ಕಾನೂನು ತಜ್ಞರೊಂದಿಗೆ ಚರ್ಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಮುಂದಿನ ಒಂದು ವರ್ಷದ ಅವಧಿಯಲ್ಲಿ ಎಲ್ಲ ಸರ್ಕಾರಿ ಕಚೇರಿಗಳು ಮತ್ತು ಸರ್ಕಾರದ ಬೆಂಬಲ ಹೊಂದಿರುವ ಸಂಸ್ಥೆಗಳಲ್ಲಿ ಕನ್ನಡ ಧ್ವಜ ಹಾರಿಸುವುದನ್ನು ಕಡ್ಡಾಯಗೊಳಿಸುವ ಆದೇಶ ಹೊರಡಿಸಲು ಸಿದ್ಧತೆ ನಡೆಸಲಾಗಿದೆ.