
ಮಂಡ್ಯದ ಶ್ರೀರಂಗಪಟ್ಟಣದ ದೇವಸ್ಥಾನದಲ್ಲಿ ಕರ್ತವ್ಯನಿರತ ಮಹಿಳಾ PSI ಸವಿತಾ ಬಿ. ಪಾಟೀಲ್ ಅವರಿಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಶಾಸಕ ಬಿ.ಎಸ್. ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ.
ಆಗಸ್ಟ್ 12ರಂದು ಭೀಮನ ಅಮಾವಾಸ್ಯೆಯಂದು ದೇವಸ್ಥಾನದ ಗರ್ಭಗುಡಿ ಪ್ರವೇಶದ ವಿಚಾರವಾಗಿ ನಡೆದ ವಾಗ್ವಾದದ ಬಳಿಕ ಐಶ್ವರ್ಯ ವಿರುದ್ಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸರ್ಕಾರಿ ಅಧಿಕಾರಿಯ ಮೇಲಿನ ಹಲ್ಲೆಯ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಶ್ರೀರಂಗಪಟ್ಟಣ ನ್ಯಾಯಾಲಯವು ಜಾಮೀನು ನಿರಾಕರಿಸಿದ್ದು, ಮುಂದಿನ ಕಾನೂನು ಕ್ರಮದ ಬಗ್ಗೆ ಕುತೂಹಲ ಮೂಡಿದೆ.