
ಕೇಂದ್ರ ಸರ್ಕಾರವು 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು 200 ರೂಪಾಯಿಗೂ ಹೆಚ್ಚು ಇಳಿಕೆ ಮಾಡಿದ್ದು, ಪರಿಷ್ಕೃತ ದರಗಳು ಆಗಸ್ಟ್ 1ರಿಂದಲೇ ಜಾರಿಗೆ ಬಂದಿವೆ.
ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 202 ರೂಪಾಯಿ ಮತ್ತು ಕೋಲ್ಕತ್ತಾದಲ್ಲಿ 209 ರೂಪಾಯಿ ಕಡಿತಗೊಂಡಿದ್ದು, ಕೋಲ್ಕತ್ತಾದಲ್ಲಿ ಹೊಸ ದರ 2,872.50 ರೂಪಾಯಿ ಆಗಿದೆ.
ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಇಳಿಕೆಯಾಗಿದ್ದರೂ, ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.