
ಸಂಪುಟ ವಿಸ್ತರಣೆಯ ನಂತರ ಸಚಿವ ಸ್ಥಾನ ಸಿಗದ ಕಾರಣ ಅಸಮಾಧಾನಗೊಂಡಿರುವ ಶಾಸಕ ಎಂ.ಕೃಷ್ಣಪ್ಪ ಅವರನ್ನು ಸಮಾಧಾನಪಡಿಸಲು ಕಾಂಗ್ರೆಸ್ ಹೈಕಮಾಂಡ್ ಪ್ರಯತ್ನ ಆರಂಭಿಸಿದೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ದೆಹಲಿಯಿಂದ ನೇರವಾಗಿ ಬೆಂಗಳೂರಿನ ವಿಜಯನಗರದಲ್ಲಿರುವ ಕೃಷ್ಣಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಸಚಿವ ಸ್ಥಾನ ಕೈತಪ್ಪಿದ್ದರಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರು ಅಖಾಡಕ್ಕಿಳಿದು ಶಾಸಕರ ಮನವೊಲಿಕೆಗೆ ಮುಂದಾಗಿದ್ದಾರೆ.