
ಭಾರತದ ಅಗ್ರ ಕ್ರಮಾಂಕದ ಬ್ಯಾಟರ್ ಹಾಗೂ ಡಬ್ಲ್ಯೂಪಿಎಲ್‌ನಲ್ಲಿ ಆರ್ಸಿಬಿ ಚಾಂಪಿಯನ್ ತಂಡದ ಭಾಗವಾಗಿದ್ದ 30 ವರ್ಷದ ಎಸ್.ಮೇಘನಾ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಆಂಧ್ರಪ್ರದೇಶ ಮೂಲದ ಮೇಘನಾ ಅವರು 2016ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟಿ20ಐ ಪಂದ್ಯ ಆಡುವ ಮೂಲಕ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದು, ಒಟ್ಟು 17 ಟಿ20 ಹಾಗೂ 3 ಏಕದಿನ ಪಂದ್ಯಗಳನ್ನು ಆಡಿದ್ದಾರೆ.
ಮುಂದಿನ ದಿನಗಳಲ್ಲಿ ಹೊಸ ತಲೆಮಾರಿನ ಮಹಿಳಾ ಕ್ರಿಕೆಟಿಗರಿಗೆ ಕೋಚಿಂಗ್ ಹಾಗೂ ಮಾರ್ಗದರ್ಶನ ನೀಡುವ ಮೂಲಕ ಕ್ರಿಕೆಟ್ ಜೊತೆಗಿನ ನಂಟನ್ನು ಕಾಯ್ದುಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.