
ತುಮಕೂರಿನ ಶ್ರೀ ಸಿದ್ಧಗಂಗಾ ಮಠವು ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಅಕ್ಷರ ಮತ್ತು ಆಶ್ರಯ ನೀಡುವ ಮೂಲಕ ಅವರ ಜೀವನ ರೂಪಿಸಿರುವುದು ಅನನ್ಯ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ಶ್ಲಾಘಿಸಿದರು.
80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಠದಲ್ಲಿ ಧ್ವಜಾರೋಹಣ ನೆರವೇರಿಸಿದ ಅವರು, ಭಾರತವು ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ದೇಶವಾಗಿ ಬೆಳೆದಿದೆ ಎಂದು ತಿಳಿಸಿದರು.
ದೇಶದ 35 ವರ್ಷ ವಯೋಮಿತಿಯೊಳಗಿನ ಯುವಶಕ್ತಿಯನ್ನು ಕೌಶಲ್ಯ ತರಬೇತಿಯ ಮೂಲಕ ಅಭಿವೃದ್ಧಿಗೆ ಬಳಸಿಕೊಳ್ಳುವುದು ಸರ್ಕಾರದ ಕರ್ತವ್ಯ ಎಂದು ಅವರು ಅಭಿಪ್ರಾಯಪಟ್ಟರು.