
ಬೆಂಗಳೂರಿನ ಚಾಮರಾಜಪೇಟೆ ಪೊಲೀಸರು ನಕಲಿ ನೋಟು ಚಲಾವಣೆಗೆ ಯತ್ನಿಸುತ್ತಿದ್ದ ಬೃಹತ್ ಅಂತರರಾಜ್ಯ ಜಾಲವನ್ನು ಭೇದಿಸಿದ್ದು, 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮೈಸೂರು ರಸ್ತೆಯ ಫ್ಲೈಓವರ್ ಬಳಿ ಕಾರಿನಲ್ಲಿ ಸಿಕ್ಕಿಬಿದ್ದ ಆರೋಪಿಗಳಿಂದ 21,68,500 ರೂಪಾಯಿ ಮೌಲ್ಯದ 500 ರೂ. ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.
ತಮಿಳುನಾಡಿನ ಪ್ರಿಂಟಿಂಗ್ ಅಡ್ಡಾದ ಮೇಲೆ ದಾಳಿ ನಡೆಸಿದ ಪೊಲೀಸರು 17 ಪ್ರಿಂಟಿಂಗ್ ಯಂತ್ರಗಳು ಹಾಗೂ ಹೆಚ್ಚುವರಿ 6 ಲಕ್ಷ ರೂ. ಮೌಲ್ಯದ ಖೋಟಾ ನೋಟುಗಳನ್ನು ಜಪ್ತಿ ಮಾಡಿದ್ದಾರೆ.