
ಲೋಕಾಯುಕ್ತ ಸಂಸ್ಥೆಯು ಬೆಂಗಳೂರು ಸೇರಿದಂತೆ ರಾಜ್ಯದ 8 ಜಿಲ್ಲೆಗಳ 8 ಸರ್ಕಾರಿ ಅಧಿಕಾರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದೆ.
ಅಧಿಕಾರಿಗಳ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಶೋಧದಲ್ಲಿ ಆದಾಯಕ್ಕಿಂತ ಶೇ.100ಕ್ಕೂ ಹೆಚ್ಚು ಅಕ್ರಮ ಆಸ್ತಿ ಪತ್ತೆಯಾಗಿದೆ.
ಕೋಟ್ಯಂತರ ರೂ. ಮೌಲ್ಯದ ಕೃಷಿ ಜಮೀನು, ವಾಣಿಜ್ಯ ಮಳಿಗೆ, ಚಿನ್ನಾಭರಣ, ನಗದು, ವಾಹನ ಹಾಗೂ ಗಾರ್ಮೆಂಟ್ ಫ್ಯಾಕ್ಟರಿಗಳು ಪತ್ತೆಯಾಗಿವೆ.