
ತಮಿಳುನಾಡಿಗೆ ನಿತ್ಯ 4 ಸಾವಿರ ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಮಂಡಳಿ ಶಿಫಾರಸು ಮಾಡಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಮತ್ತು ರೈತರು ಮಂಡ್ಯದ ಜೆ.ಸಿ.ವೃತ್ತದಲ್ಲಿ ಬೆಂಗಳೂರು-ಮೈಸೂರು ಹಳೇ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ಕಾವೇರಿ ನೀರನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಿಳುನಾಡು ಮುಖ್ಯಮಂತ್ರಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಶಿವಳ್ಳಿ ಚಂದ್ರಶೇಖರ್ ಮತ್ತು ಸುನಂದಾ ಜಯರಾಂ ಆರೋಪಿಸಿದರು.
ತಮಿಳುನಾಡಿಗೆ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಿ, ಕಾವೇರಿ ಕೊಳ್ಳದ ರೈತರ ಕೃಷಿಗೆ ಹಾಗೂ ಜನಜಾನುವಾರುಗಳ ಕುಡಿಯಲು ನೀರು ಬಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.