
ಬಿಹಾರದ ಬಂಕಿಪುರ ಉಪಚುನಾವಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರ ಭದ್ರಕೋಟೆಯನ್ನು ಜನ ಸುರಾಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಮೊದಲ ಪ್ರಯತ್ನದಲ್ಲೇ ಭೇದಿಸಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿಯ ಪ್ರತಿಷ್ಠೆಯ ಕಣವಾಗಿದ್ದ ಈ ಚುನಾವಣೆಯಲ್ಲಿ ಗೆಲ್ಲಲು ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, ಕೇಂದ್ರ ಸಚಿವರು ಮತ್ತು ಇಡೀ ಬಿಹಾರ ಸಚಿವ ಸಂಪುಟವೇ ಬಂಕಿಪುರದಲ್ಲಿ ಬೀಡುಬಿಟ್ಟಿದ್ದರೂ ಸೋಲು ಅನುಭವಿಸಿದೆ.
ಪ್ರಶಾಂತ್ ಕಿಶೋರ್ ಅವರ ಗೆಲುವು ಖಚಿತವಾಗುತ್ತಿದ್ದಂತೆ ಜನ ಸುರಾಜ್ ಪಕ್ಷದ ಕಾರ್ಯಕರ್ತರು ರಸ್ತೆಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.