
ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಕೇವಲ 38 ಎಸೆತಗಳಲ್ಲಿ 113 ರನ್ ಸಿಡಿಸಿದ ಭಾರತದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ, ಐಸಿಸಿ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಮತ್ತೆ ನಂ.1 ಸ್ಥಾನ ಪಡೆದಿದ್ದಾರೆ.
ಈ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ ಅಭಿಷೇಕ್, ಇಶಾನ್ ಕಿಶನ್ ಅವರನ್ನು ಹಿಂದಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ. ಇಶಾನ್ ಕಿಶನ್ ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ.
ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಕಳಪೆ ಫಾರ್ಮ್ನಿಂದಾಗಿ ನಾಲ್ಕು ಸ್ಥಾನ ಕುಸಿದು 9ನೇ ಸ್ಥಾನಕ್ಕೆ ತಲುಪಿದ್ದಾರೆ.