
ಯಶವಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ 22 ವರ್ಷದ ಶಹೀನ್ ಎಂಬ ಯುವಕ ಸಾವನ್ನಪ್ಪಿದ್ದಾರೆ.
ಇನ್ಶೂರೆನ್ಸ್ ಮತ್ತು ನಗದು ಡೆಪಾಸಿಟ್ ಹಣಕ್ಕಾಗಿ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ನಾಲ್ಕು ಗಂಟೆಗಳ ಕಾಲ ಚಿಕಿತ್ಸೆಯನ್ನು ವಿಳಂಬ ಮಾಡಿದ್ದೇ ಸಾವಿಗೆ ಕಾರಣ ಎಂದು ಸ್ನೇಹಿತರು ಆರೋಪಿಸಿದ್ದಾರೆ.
ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮೃತರ ಕುಟುಂಬಸ್ಥರು ಮತ್ತು ಸ್ನೇಹಿತರು ಆಸ್ಪತ್ರೆ ಎದುರು ಭಾರಿ ಪ್ರತಿಭಟನೆ ನಡೆಸಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ.