
ಕಲಬುರಗಿ ಜಿಲ್ಲೆಯ ಎರಡು ಪ್ರಮುಖ ನೀರಾವರಿ ಯೋಜನೆಗಳಿಗೆ ರಾಜ್ಯ ಸಚಿವ ಸಂಪುಟ ಒಟ್ಟು 105.20 ಕೋಟಿ ರೂಪಾಯಿ ಅನುದಾನ ಬಿಡುಗಡೆಗೆ ಅನುಮೋದನೆ ನೀಡಿದೆ.
ಆಳಂದ ತಾಲೂಕಿನ 12 ಕೆರೆಗಳಿಗೆ ನೀರು ತುಂಬಿಸುವ 56 ಕೋಟಿ ರೂಪಾಯಿ ವೆಚ್ಚದ ಏತ ನೀರಾವರಿ ಯೋಜನೆ ಮತ್ತು 49.20 ಕೋಟಿ ರೂಪಾಯಿ ವೆಚ್ಚದ ಸಣ್ಣ ನೀರಾವರಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.
ಈ ಯೋಜನೆಗಳ ಮೂಲಕ 28.94 ಎಂಸಿಎಫ್‌ಟಿ ನೀರನ್ನು ಸಂಗ್ರಹಿಸಿ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.