
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ದಾಳಿ ನಡೆಯುತ್ತಿದೆ ಮತ್ತು ಮತ ಕಳ್ಳತನವಾಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ದೆಹಲಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮೋದಿ, ಅಮಿತ್ ಶಾ, ಮೋಹನ್ ಭಾಗವತ್ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದರು.
ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಖಚಿತಪಡಿಸಿಕೊಳ್ಳಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ.