
ಮಲೆನಾಡು ಮತ್ತು ಕೇರಳ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಬಿನಿ ಜಲಾಶಯದ ಒಳಹರಿವು 9,133 ಕ್ಯೂಸೆಕ್ಗೆ ಏರಿಕೆಯಾಗಿದ್ದು, ಡ್ಯಾಂ ಭರ್ತಿಯಾಗಲು ಕೆಲವೇ ಅಡಿಗಳಷ್ಟು ಬಾಕಿ ಇದೆ.
ಜುಲೈ 31ರ ಅಂಕಿಅಂಶದಂತೆ 19.52 ಟಿಎಂಸಿ ಸಾಮರ್ಥ್ಯದ ಕಬಿನಿ ಜಲಾಶಯದಲ್ಲಿ 16 ಟಿಎಂಸಿ ನೀರು ಸಂಗ್ರಹವಾಗಿದ್ದು, ಆಲಮಟ್ಟಿ ಜಲಾಶಯಕ್ಕೆ 82,743 ಕ್ಯೂಸೆಕ್ ಒಳಹರಿವು ದಾಖಲಾಗಿದೆ.
ಮುಂದಿನ ಮೂರು ದಿನಗಳ ಕಾಲ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೇರಳ ಭಾಗದಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದ್ದು, ಜಲಾಶಯಗಳ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ.