
ಬಳ್ಳಾರಿ ಜಿಲ್ಲೆಯಲ್ಲಿ ಶೇ.49ರಷ್ಟು ಮಳೆ ಕೊರತೆಯಾಗಿದ್ದು, 67,236 ಹೆಕ್ಟೇರ್ ಕೃಷಿ ಬೆಳೆ ಹಾಗೂ 4,520 ಹೆಕ್ಟೇರ್ ತೋಟಗಾರಿಕಾ ಬೆಳೆಗಳು ಹಾನಿಗೊಳಗಾಗಿದ್ದು, ಜಿಲ್ಲೆಯ ಐದೂ ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ.
ಸಂಕಷ್ಟಕ್ಕೀಡಾಗಿರುವ ರೈತರಿಗೆ ಮೊದಲ ಹಂತದಲ್ಲಿ ತಲಾ 2,500 ರೂಪಾಯಿ ಪರಿಹಾರ ಒದಗಿಸಲಾಗಿದ್ದು, ಗ್ರಾಮೀಣ ಜನರ ವಲಸೆ ತಡೆಯಲು 22.16 ಕೋಟಿ ರೂಪಾಯಿ ವೆಚ್ಚದಲ್ಲಿ 9.28 ಲಕ್ಷ ಮಾನವ ದಿನಗಳ ಉದ್ಯೋಗ ಸೃಜಿಸಲಾಗಿದೆ ಎಂದು ಡಿಸಿಎಂ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಕೇಂದ್ರದಿಂದ ಸುಮಾರು 8,000 ಕೋಟಿ ರೂ. ನೆರವು ಕೋರಲಾಗಿದೆ ಮತ್ತು ಅಂತಿಮವಾಗಿ 18-20 ಸಾವಿರ ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗುವುದು.