
ಕರ್ನಾಟಕದಲ್ಲಿ ನಂದಿನಿ ಹಾಲಿನ ಖರೀದಿ ಮತ್ತು ಮಾರಾಟ ದರವನ್ನು ಪ್ರತಿ ಲೀಟರ್‌ಗೆ ₹8ರಿಂದ ₹10ರವರೆಗೆ ಹೆಚ್ಚಿಸುವಂತೆ ಕರ್ನಾಟಕ ರಾಜ್ಯದ ಸಹಕಾರ ಹಾಲು ಉತ್ಪಾದಕರ ಒಕ್ಕೂಟಗಳ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದೆ.
ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಮಾತನಾಡಿ, ಪಶು ಆಹಾರ, ಮೇವು ಹಾಗೂ ಔಷಧೋಪಚಾರದ ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವುದರಿಂದ ಪ್ರತಿ ಲೀಟರ್ ಹಾಲಿನ ಉತ್ಪಾದನಾ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ ಎಂದು ವಿವರಿಸಿದರು.
ಕರ್ನಾಟಕದಲ್ಲಿ ಟೋನ್ಡ್ ಹಾಲನ್ನು ಪ್ರತಿ ಲೀಟರ್‌ಗೆ ₹35ಕ್ಕೆ ಖರೀದಿಸಲಾಗುತ್ತಿದ್ದು, ನೆರೆಯ ಆಂಧ್ರಪ್ರದೇಶದಲ್ಲಿ ₹41.50, ಕೇರಳದಲ್ಲಿ ₹41.80, ಮಹಾರಾಷ್ಟ್ರದಲ್ಲಿ ₹41 ಹಾಗೂ ತಮಿಳುನಾಡಿನಲ್ಲಿ ₹42.24 ಇದೆ ಎಂದು ಒಕ್ಕೂಟ ತಿಳಿಸಿದೆ.