
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ ಒಪ್ಪಿಗೆ ನೀಡಿದ್ದು, ಸೋಮವಾರ ನೂತನ ಸಚಿವರ ಪ್ರಮಾಣವಚನ ನಡೆಯುವ ಸಾಧ್ಯತೆ ದಟ್ಟವಾಗಿದೆ.
ಗುರುವಾರ ದೆಹಲಿಯಲ್ಲಿ ರಾಹುಲ್ ಗಾಂಧಿ ಅವರು ಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಂದ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಸ್ವೀಕರಿಸಿ ಪರಿಶೀಲನೆ ನಡೆಸಿದ್ದಾರೆ.
ಪರಿಷ್ಕೃತ ಅಂತಿಮ ಪಟ್ಟಿಯನ್ನು ಎರಡು ದಿನದೊಳಗೆ ರಾಜ್ಯಕ್ಕೆ ಕಳುಹಿಸುವುದಾಗಿ ಹೈಕಮಾಂಡ್ ತಿಳಿಸಿದ್ದು, ಶಾಸಕರು ಬೆಂಗಳೂರಿಗೆ ವಾಪಸ್ ಆಗಿದ್ದಾರೆ.