
ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ 100 ಕೋಟಿ ರೂಪಾಯಿ ಮೌಲ್ಯದ 24 ಎಕರೆ ಸರ್ಕಾರಿ ಬಿ-ಖರಾಬು ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಇ-ಖಾತೆ ಮಾಡಿಕೊಡಲಾಗಿದೆ.
ಅಣಕನೂರು ಗ್ರಾಮದ ಸರ್ವೆ ನಂಬರ್ 109ರಲ್ಲಿರುವ ಈ ಜಾಗವು ಕೆರೆಯಂಗಳ ಮತ್ತು ರೈಲ್ವೆ ಇಲಾಖೆಗೆ ಸೇರಿದ್ದಾಗಿದ್ದರೂ, ಪೌರಾಯುಕ್ತ ಮನ್ಸೂರ್ ಅಲಿ ನೇತೃತ್ವದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ.
ನಗರಸಭೆಯ ಮಾಜಿ ಸದಸ್ಯ ಅಮೀರ್ ಮೊಹಮ್ಮದ್ ಸಾಧಿಕ್ ಅವರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಾರ್ವಜನಿಕರು ಆಗ್ರಹಿಸಿದ್ದಾರೆ.