
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ್ ಗ್ರಾಮದ ಬಾವಿಯಲ್ಲಿ ಎರಡು ತಿಂಗಳ ಹಸುಗೂಸಿನ ಮೃತದೇಹ ಪತ್ತೆಯಾಗಿದ್ದು, ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ ತಾಲೂಕಿನ ನೆಗಳೂರು ಗ್ರಾಮದಲ್ಲಿ ಕುರಿ ಮೇಯಿಸುತ್ತಿದ್ದ 28 ವರ್ಷದ ನಾಗರಾಜ್ ಕರಿಗಾರ ಎಂಬ ಯುವಕ ಹಾವು ಕಚ್ಚಿ ಮೃತಪಟ್ಟಿದ್ದಾನೆ.
ಮೃತ ನಾಗರಾಜ್ ಕಳೆದ ವಾರವಷ್ಟೇ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಬರೆದಿದ್ದು, ಶೇ. 75ಕ್ಕೂ ಹೆಚ್ಚು ಅಂಕ ಗಳಿಸುವ ನಿರೀಕ್ಷೆಯಲ್ಲಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.