
ಮೀರತ್ನ ಮರ್ಚೆಂಟ್ ನೇವಿ ಉದ್ಯೋಗಿ ಸೌರಭ್ ರಜಪೂತ್ ಕೊಲೆ ಪ್ರಕರಣದಲ್ಲಿ ಅವರ ಪತ್ನಿ ಮುಸ್ಕಾನ್ ಹಾಗೂ ಪ್ರಿಯಕರ ಸಾಹಿಲ್ ತಪ್ಪಿತಸ್ಥರು ಎಂದು ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ.
ಮರ್ಚೆಂಟ್ ನೇವಿ ಅಧಿಕಾರಿಯಾಗಿದ್ದ ಸೌರಭ್ಗೆ ನಿದ್ದೆ ಮಾತ್ರೆ ನೀಡಿ ಚಾಕುವಿನಿಂದ ಇರಿದು ಕೊಲೆ ಮಾಡಿ, ಶವವನ್ನು ನೀಲಿ ಬಣ್ಣದ ಪ್ಲಾಸ್ಟಿಕ್ ಡ್ರಮ್ನಲ್ಲಿ ಸಿಮೆಂಟ್ ಹಾಕಿ ಮುಚ್ಚಲಾಗಿತ್ತು.
ಸುಮಾರು 13 ತಿಂಗಳ ನ್ಯಾಯಾಲಯದ ಪ್ರಕ್ರಿಯೆ ಹಾಗೂ 22ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆಯ ನಂತರ ಈ ಮಹತ್ವದ ತೀರ್ಪು ಹೊರಬಿದ್ದಿದ್ದು, ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಲಾಗಿದೆ.