
ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಸಾರ್ವಜನಿಕರಿಗೆ ಯಾವುದೇ ಗೊಂದಲಗಳಿದ್ದರೆ 1950 ಹೆಲ್ಪ್ಲೈನ್ಗೆ ಕರೆ ಮಾಡುವಂತೆ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಎಂ. ಮಹೇಶ್ವರ್ ರಾವ್ ಸೂಚಿಸಿದ್ದಾರೆ.
ರಾಜ್ಯದಲ್ಲಿ ಎಸ್ಐಆರ್ ಅಂತಿಮ ಹಂತ ತಲುಪಿದ್ದು, ಕರಡು ಪಟ್ಟಿಯಿಂದ 1.07 ಕೋಟಿ ಮತದಾರರನ್ನು ಹೊರಗಿಡಲಾಗಿದ್ದು, ಸೆಪ್ಟೆಂಬರ್ 19 ಮತ್ತು 20ರಂದು ಹೊಸ ಮತದಾರರ ನೋಂದಣಿಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಸೆಪ್ಟೆಂಬರ್ 23ರಂದು ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅಂತಿಮ ಗಡುವು ಇದ್ದು, ಅರ್ಹರು ಫಾರ್ಮ್-6 ಮೂಲಕ ನೋಂದಣಿ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ.