
ಅನೂಪ್ ಭಂಡಾರಿ ನಿರ್ದೇಶನದ ಸುದೀಪ್ ನಟನೆಯ ‘ಬಿಲ್ಲ ರಂಗ ಬಾಷಾ: ಫಸ್ಟ್ ಬ್ಲಡ್’ ಸಿನಿಮಾ 2027ರ ವರ್ಷಾಂತ್ಯಕ್ಕೆ ತೆರೆಕಾಣಲಿದ್ದು, ಚಿತ್ರೀಕರಣ ಪ್ರಗತಿಯಲ್ಲಿದೆ.
2209 ಎ.ಡಿ.ಯ ಭವಿಷ್ಯದ ಪ್ರಪಂಚದ ಕಥೆಯನ್ನು ಹೊಂದಿರುವ ಈ ಚಿತ್ರವನ್ನು ಕೆ.ನಿರಂಜನ್ ರೆಡ್ಡಿ ಮತ್ತು ಚೈತನ್ಯ ರೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ.
ಸೆಪ್ಟೆಂಬರ್ 2ರಂದು ಸುದೀಪ್ ಅವರ ಜನ್ಮದಿನದ ಅಂಗವಾಗಿ ಚಿತ್ರದ ವಿಶೇಷ ಪೋಸ್ಟರ್ ಬಿಡುಗಡೆಯಾಗಲಿದ್ದು, 2027ರ ಮಾರ್ಚ್ ಒಳಗೆ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ.