
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರು, ಧಾರವಾಡ ಮತ್ತು ಮೈಸೂರು ನಗರಗಳಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಗ್ರಂಥಾಲಯಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.
ಶಿಕ್ಷಣ ಇಲಾಖೆಯಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಹೆಚ್ಚುವರಿಯಾಗಿ 2,500 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಮುದ್ರಣ ಇಲಾಖೆಯ ಬೇಡಿಕೆಯಂತೆ ಕಳೆದ 10 ವರ್ಷಗಳಿಂದ ಸ್ಥಗಿತಗೊಂಡಿದ್ದ ಪುಸ್ತಕಗಳ ಪುಟ ಮುದ್ರಣ ದರವನ್ನು ಪ್ರತಿ ಪುಟಕ್ಕೆ 50 ಪೈಸೆ ಹೆಚ್ಚಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಘೋಷಿಸಿದರು.