
ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಜನರು ಲೈಸನ್ಸ್ ಇಲ್ಲದೆ ಹೊಂದಿರುವ ಬಂದೂಕುಗಳನ್ನು ನವೆಂಬರ್ 1ರೊಳಗೆ ತಮ್ಮ ವ್ಯಾಪಿಗೆ ಬರುವ ಪೊಲೀಸ್ ಠಾಣೆಗೆ ಒಪ್ಪಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ ಮನವಿ ಮಾಡಿದರು.
ಅರಣ್ಯ ಮತ್ತು ಪ್ರಾಣಿಗಳ ರಕ್ಷಣೆಗಾಗಿ ಸಾವಿರಾರು ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಲೈಸನ್ಸ್ ಇಲ್ಲದ ಬಂದೂಕುಗಳಿಂದ ಪ್ರಾಣಿಗಳ ಬೇಟೆ ಆಡುವುದನ್ನು ನಿಲ್ಲಿಸುವಂತೆ ಅವರು ಎಚ್ಚರಿಕೆ ನೀಡಿದ್ದಾರೆ.
ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಸ್ಪಷ್ಟ ಅಭಿಪ್ರಾಯ ಮಂಡಿಸಲು ಹಿರಿಯ ವಕೀಲರನ್ನು ನೇಮಿಸಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.