
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಪಕ್ಷದ ಹೊಸ ಕೇಂದ್ರ ತಂಡವನ್ನು ರಚಿಸಿದ್ದು, ಮಾಜಿ ಸಚಿವೆ ಸ್ಮೃತಿ ಇರಾನಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.
ಹೊಸ ತಂಡದಲ್ಲಿ 13 ರಾಷ್ಟ್ರೀಯ ಉಪಾಧ್ಯಕ್ಷರು, 8 ಪ್ರಧಾನ ಕಾರ್ಯದರ್ಶಿಗಳು ಮತ್ತು 16 ಮೋರ್ಚಾ ಅಧ್ಯಕ್ಷರಿದ್ದು, ಕರ್ನಾಟಕದ ಪ್ರೊ. ನಾಗರಾಜ್ ಉಪಾಧ್ಯಕ್ಷರಾಗಿ ಮತ್ತು ಬಿ.ಎಲ್. ಸಂತೋಷ್ ಸಂಘಟನಾ ಕಾರ್ಯದರ್ಶಿಯಾಗಿ ಮುಂದುವರಿದಿದ್ದಾರೆ.
ಯುವ ಮೋರ್ಚಾ ಅಧ್ಯಕ್ಷರಾಗಿದ್ದ ತೇಜಸ್ವಿ ಸೂರ್ಯ ಅವರ ಬದಲಿಗೆ ಗುಜರಾತ್‌ನ ಡಾ. ಹೇಮಾಂಗ್ ಜೋಶಿ ಅವರನ್ನು ನೂತನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.