
ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳ ಕುರಿತ ವರದಿಯ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹಳೆಯ ಮತದಾರರ ಪಟ್ಟಿಯನ್ನು ಆಧರಿಸಿ ಪಶ್ಚಿಮ ಬಂಗಾಳದಲ್ಲಿ ಮತ್ತೆ ವಿಧಾನಸಭಾ ಚುನಾವಣೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿರುವ ಅವರು, ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.