
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 2,600 ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಿದೆ.
ಸಾಲು ಸಾಲು ರಜೆಗಳನ್ನು ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಮಾಲೀಕರು ಮಾಮೂಲಿ ದಿನಗಳಿಗಿಂತ ಎರಡ್ಮೂರು ಪಟ್ಟು ಹೆಚ್ಚು ದರವನ್ನು ವಸೂಲಿ ಮಾಡುತ್ತಿದ್ದಾರೆ.
ಖಾಸಗಿ ಬಸ್‌ಗಳ ಗಗನಚುಂಬಿ ದರ ಏರಿಕೆಯಿಂದಾಗಿ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.