
ಮುರಸು ಚಂಡಮಾರುತ ಮತ್ತು ಕಡಿಮೆ ಒತ್ತಡದ ಪ್ರದೇಶವು ದುರ್ಬಲಗೊಂಡಿದ್ದರೂ, ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ.
ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಪ್ರದೇಶಗಳಲ್ಲಿ ಇನ್ನೂ ಮೂರರಿಂದ ನಾಲ್ಕು ದಿನಗಳ ವರೆಗೆ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.