
ಸೆಪ್ಟೆಂಬರ್ 11ರಿಂದ ದೆಹಲಿಯ ಭಾರತ್ ಮಂಡಪಂನಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ 11 ರಾಷ್ಟ್ರಗಳು ಭಾಗವಹಿಸುತ್ತಿವೆ.
ಅರ್ಥಶಾಸ್ತ್ರಜ್ಞ ಜಿಮ್ ಒ'ನೀಲ್ ಪ್ರಕಾರ, ಭಾರತ ಮತ್ತು ಚೀನಾ ತಮ್ಮ ಭಿನ್ನಾಭಿಪ್ರಾಯ ಬದಿಗೊತ್ತಿ ಸಹಕರಿಸಿದರೆ ಅದು ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ ತರಲಿದೆ.
ಮುಂದಿನ ಕೆಲವೇ ವರ್ಷಗಳಲ್ಲಿ ಭಾರತವು ಜರ್ಮನಿ ಮತ್ತು ಜಪಾನ್ಗಳನ್ನು ಹಿಂದಿಕ್ಕಿ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.